ಯೆಹೋಶುವ 4:3 - ಕನ್ನಡ ಸತ್ಯವೇದವು J.V. (BSI)3 ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿರುವ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ನಿಲ್ಲಿಸಿರಿ ಎಂದು ಆಜ್ಞಾಪಿಸಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರಿಗೆ, ‘ನೀವು ಜೋರ್ಡನಿನ ಮಧ್ಯದಲ್ಲಿ ಯಾಜಕರು ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ, ಅವುಗಳನ್ನು ನಿಮ್ಮ ಸಂಗಡ ಈಚೆ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿ’ ಎಂದು ಆಜ್ಞಾಪಿಸು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೊರ್ದನ್ ನದಿ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಲ್ಲಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅವುಗಳನ್ನು ನಿಮ್ಮ ಸಂಗಡ ಆಚೆದಡಕ್ಕೆ ತಂದು, ನೀವು ಈ ರಾತ್ರಿಯಲ್ಲಿ ಇಳಿದುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾಪಿಸು,” ಎಂದರು. ಅಧ್ಯಾಯವನ್ನು ನೋಡಿ |