ಯೆಹೋಶುವ 5:12 - ಕನ್ನಡ ಸತ್ಯವೇದವು J.V. (BSI)12 ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿವಸವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರಿಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನು ಅನುಭವಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ನಾಡಿನ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ಮತ್ತೆ ಸಿಕ್ಕಲೇ ಇಲ್ಲ. ಇಸ್ರಯೇಲರು ಆ ವರ್ಷವೆಲ್ಲ ಕಾನಾನ್ ನಾಡಿನ ಉತ್ಪನ್ನವನ್ನೇ ಅನುಭವಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಆ ದೇಶದ ಧಾನ್ಯವನ್ನು ತಿಂದ ಮರುದಿವಸದಲ್ಲೇ ಮನ್ನವು ನಿಂತುಹೋಯಿತು. ಇಸ್ರಾಯೇಲರಿಗೆ ಮನ್ನ ಮತ್ತೆ ಸಿಕ್ಕಲಿಲ್ಲ. ಅವರು ಆ ವರುಷದಲ್ಲಿ ಕಾನಾನ್ ದೇಶದ ಫಲವನ್ನು ತಿಂದರು. ಅಧ್ಯಾಯವನ್ನು ನೋಡಿ |