Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 5:7 - ಕನ್ನಡ ಸತ್ಯವೇದವು J.V. (BSI)

7 ಅವರಿಗೆ ಪ್ರತಿಯಾಗಿ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲವಾದದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಅವರ ಪೂರ್ವಿಕರಿಗೆ ಪ್ರತಿಯಾಗಿ ಹುಟ್ಟಿದ ಗಂಡು ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲ. ಆದುದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಿಗೆ ಬದಲಾಗಿ ಹುಟ್ಟಿದ ಅವರ ಗಂಡುಮಕ್ಕಳಿಗೆ ಯೆಹೋಶುವ ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿ ಮಾಡಿರಲಿಲ್ಲ. ಆದ್ದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರಿಗೆ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿಸಿದನು. ಅವರಿಗೆ ಮಾರ್ಗದಲ್ಲಿ ಸುನ್ನತಿ ಮಾಡದೆ ಇದ್ದುದರಿಂದ ಅವರು ಸುನ್ನತಿ ಇಲ್ಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 5:7
5 ತಿಳಿವುಗಳ ಹೋಲಿಕೆ  

ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಒಳ್ಳೇದು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು; ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು; ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭೋಗಿಸುವರು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ಜನಾಂಗದವರಿಗೆಲ್ಲಾ ಸುನ್ನತಿಯಾದ ಮೇಲೆ ಅವರು ವಾಸಿಯಾಗುವವರೆಗೆ ತಮ್ಮ ತಮ್ಮ ಸ್ಥಳಗಳಲ್ಲಿ ಪಾಳೆಯದಲ್ಲಿಯೇ ಇದ್ದರು.


ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವದಕ್ಕಾಗುವದಿಲ್ಲ; ಹಾಗೆ ಕೊಡುವದು ನಮಗೆ ಅಪಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು