ಯೆಹೋಶುವ 6:1 - ಕನ್ನಡ ಸತ್ಯವೇದವು J.V. (BSI)1 (ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೆರಿಕೋದ ಜನರು ಇಸ್ರಯೇಲರಿಗೆ ಹೆದರಿ ತಮ್ಮ ನಗರದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದರು. ಯಾರೂ ಹೊರಗೆ ಬರುತ್ತಿರಲಿಲ್ಲ, ಒಳಗೆ ಹೋಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು. ಅಧ್ಯಾಯವನ್ನು ನೋಡಿ |