Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:13 - ಕನ್ನಡ ಸತ್ಯವೇದವು J.V. (BSI)

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು; ಹಿಂದಣ ದಳವು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಏಳುಮಂದಿ ಯಾಜಕರು ಏಳು ತುತ್ತೂರಿಗಳನ್ನು ತೆಗೆದುಕೊಂಡು ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ನಡೆದರು. ಆಯಧ ಸನ್ನದ್ಧರಾದ ಸೈನಿಕರು ಅವರ ಮುಂದೆ ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ನಡೆದರು. ಯೆಹೋವನ ಪವಿತ್ರ ಪೆಟ್ಟಿಗೆಯ ಹಿಂಭಾಗದಲ್ಲಿ ಉಳಿದ ಜನರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ತುತ್ತೂರಿಗಳನ್ನು ಊದುತ್ತಾ ಪಟ್ಟಣದ ಸುತ್ತಲೂ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:13
8 ತಿಳಿವುಗಳ ಹೋಲಿಕೆ  

ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಉತ್ಸವದಿಂದ ತರುತ್ತಿರುವಾಗ ಅದನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದರಿಂದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞಮಾಡಿದರು.


ಆಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;


ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂದಣ ದಳವು ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.


ಯೆಹೋಶುವನು ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.


ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು