ಯೆಹೋಶುವ 6:17 - ಕನ್ನಡ ಸತ್ಯವೇದವು J.V. (BSI)17 ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು. ಅಧ್ಯಾಯವನ್ನು ನೋಡಿ |