ಯೆಹೋಶುವ 6:18 - ಕನ್ನಡ ಸತ್ಯವೇದವು J.V. (BSI)18 ನೀವಾದರೋ ಯೆಹೋವನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವದನ್ನಾದರೂ ತೆಗೆದುಕೊಂಡರೆ ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ಕೆಟ್ಟೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವಾದರೋ ಸರ್ವೇಶ್ವರನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ ಇಸ್ರಯೇಲರ ಪಾಳೆಯವೇ ಶಾಪಕ್ಕೆ ಗುರಿಯಾಗಿ ನಾಶವಾದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.