Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:23 - ಕನ್ನಡ ಸತ್ಯವೇದವು J.V. (BSI)

23 ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿರುವದೆಲ್ಲವನ್ನೂ ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಂತೆಯೇ ಅವರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿದ್ದುದೆಲ್ಲವನ್ನೂ ಅವಳ ಎಲ್ಲಾ ಸಂಬಂಧಿಕರನ್ನೂ ಇಸ್ರಯೇಲರ ಪಾಳೆಯದ ಹೊರಗಡೆ ಸುಭದ್ರವಾಗಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಇಬ್ಬರು, ರಾಹಾಬಳ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬಂದರು. ಅವಳ ತಂದೆ, ತಾಯಿ, ಸಹೋದರರು ಮತ್ತು ಅವಳ ಎಲ್ಲ ಕುಟುಂಬದವರನ್ನು ಮತ್ತು ಅವಳ ಸಂಗಡ ಅಲ್ಲಿ ಇದ್ದ ಬೇರೆ ಎಲ್ಲ ಜನರನ್ನು ಸಹ ಅವರು ಹೊರಗೆ ಕರೆದುಕೊಂಡು ಬಂದರು. ಅವರೆಲ್ಲರನ್ನು ಇಸ್ರೇಲಿನ ಜನರ ಪಾಳೆಯದ ಹೊರಗಡೆ ಒಂದು ಸುರಕ್ಷಿತವಾದ ಸ್ಥಳದಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದರಂತೆ ಆ ಯೌವನಸ್ಥರು ಒಳಗೆ ಹೋಗಿ, ರಾಹಾಬಳನ್ನೂ ಅವಳ ತಂದೆಯನ್ನೂ ಅವಳ ತಾಯಿಯನ್ನೂ ಅವಳ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಗೋತ್ರದ ಎಲ್ಲಾ ಸಂಬಂಧಿಕರನ್ನೂ ಹೊರಗೆ ಕರೆತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:23
15 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ಹೊರಗಿನವರನ್ನು ಕುರಿತು ತೀರ್ಪುಮಾಡುವದಕ್ಕೆ ನನಗೇನಧಿಕಾರ? ಒಳಗಿನವರನ್ನು ಕುರಿತು ತೀರ್ಪುಮಾಡುವವರು ನೀವು ಅಲ್ಲವೇ?


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.


ನೀವಾದರೋ ಏಳುದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ ಶವಸೋಂಕಿದವರೂ ನಿಮ್ಮವರಾದರೂ ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು. ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣ ತಮ್ಮಂದಿರನ್ನೂ ಎಲ್ಲಾ ಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.


ನನ್ನ ತಂದೆತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವದೆಲ್ಲವನ್ನೂ ನಾಶಮಾಡದೆ ಉಳಿಸುವದಾಗಿಯೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ ಎಂಬದೇ.


ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.


ಆ ಪರ್ವತಕ್ಕೆ ಓಡಿಹೋಗಿ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ ಅಂದಳು.


ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು