Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 6:24 - ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 6:24
13 ತಿಳಿವುಗಳ ಹೋಲಿಕೆ  

ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಯಾವ ಕಾಲಕ್ಕೂ ತಿರಿಗಿ ಕಟ್ಟಲ್ಪಡದಂತೆ ಹಾಳುದಿಬ್ಬವಾಗ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳುವದರಿಂದ ಅವಳಿಗೆ ಕೊಲೆ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿಸುವವು; ಅವಳು ಬೆಂಕಿಯಿಂದ ಸುಟ್ಟುಹೋಗುವಳು; ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ;


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು.


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು.


ಸೂಳೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿನೋಡುವದಕ್ಕೆ ಬಂದಿದ್ದ ಯೆಹೋಶುವನ ದೂತರನ್ನು ಅಡಗಿಸಿಟ್ಟದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.


ಅವರು ಇದ್ದ ಎಲ್ಲಾ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಬಿಟ್ಟರು.


ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಪ್ರಾಣಿಯಾದರೂ ಉಳಿಯಲಿಲ್ಲ.


ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಳುಗಳ ಮುಖಾಂತರವಾಗಿ - ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ ಎಂದು ಹೇಳಿಸಿದನು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು