Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:12 - ಕನ್ನಡ ಸತ್ಯವೇದವು J.V. (BSI)

12 ಆದದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸುವರು. ಅವರು ಶಾಪಗ್ರಸ್ತರೇ. ಶಾಪಕ್ಕೆ ಕಾರಣವಾದದ್ದನ್ನು ನಿಮ್ಮ ಮಧ್ಯದಿಂದ ತೆಗೆದು ಹಾಕುವವರೆಗೆ ನಾನು ನಿಮ್ಮ ಸಂಗಡ ಬರುವದಿಲ್ಲ. ಎದ್ದು ಜನರನ್ನು ಶುದ್ಧಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:12
21 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.


ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.


ನೀವಾದರೋ ಯೆಹೋವನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವದನ್ನಾದರೂ ತೆಗೆದುಕೊಂಡರೆ ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ಕೆಟ್ಟೀತು.


ಅದು ಕೇವಲ ಯೆಹೋವನದಾಗುವದಕ್ಕೆ ನಾಶವಾಗತಕ್ಕದ್ದಾಗಿರುವದರಿಂದ ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟದಿರಬೇಕು.


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು.


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿವಾಸಿಗಳಿಲ್ಲದ ದೇಶವನ್ನಾಗಿ ಮಾಡದಂತೆ ಶಿಕ್ಷಣವನ್ನು ಹೊಂದು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲ್ಯರೆಲ್ಲರೂ ಗಟ್ಟಿಯಾಗಿ ಅತ್ತರು.


ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.


ಆಗ ಅವಳು - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನು ಎಚ್ಚತ್ತು - ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ಆಗ ಸೌಲನು ಪ್ರಜೆಯ ಮುಖಂಡರಿಗೆ - ನೀವೆಲ್ಲರೂ ಇಲ್ಲಿ ಬಂದು ಈ ಹೊತ್ತು ಪಾಪ ಯಾವದರಿಂದುಂಟಾಯಿತೋ ವಿಚಾರಿಸಿ ಗೊತ್ತುಮಾಡಿರಿ.


ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದ್ದೀ; ವೈರಿಗಳು ನಮ್ಮ ಸೊತ್ತನ್ನು ಬೇಕಾದ ಹಾಗೆ ಸೂರೆಮಾಡುತ್ತಾರೆ.


ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿಯಾ?


ಯೆಹೋವನು ನಿಮ್ಮ ಸಂಗಡ ಇರುವದಿಲ್ಲ; ಹತ್ತಬೇಡಿರಿ; ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತೀರಿ;


ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು