ಯೆಹೋಶುವ 7:13 - ಕನ್ನಡ ಸತ್ಯವೇದವು J.V. (BSI)13 ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |