Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:16 - ಕನ್ನಡ ಸತ್ಯವೇದವು J.V. (BSI)

16 ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲರ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಿದನು. ಯೆಹೂದಕುಲ ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮಾರನೆಯ ದಿನ, ಬೆಳಿಗ್ಗೆ ಯೆಹೋಶುವನು ಇಸ್ರೇಲಿನ ಎಲ್ಲ ಜನರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದನು. ಎಲ್ಲ ಕುಲಗಳು ಯೆಹೋವನ ಮುಂದೆ ನಿಂತುಕೊಂಡವು. ಯೆಹೋವನು ಯೆಹೂದ ಕುಲವನ್ನು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮರುದಿನ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರ ಗೋತ್ರವಾಗಿ ಕರೆದಾಗ, ಯೆಹೂದ ಗೋತ್ರವು ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:16
7 ತಿಳಿವುಗಳ ಹೋಲಿಕೆ  

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ.


ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು.


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲ್ಯರಲ್ಲಿ ಬುದ್ಧಿಹೀನಕಾರ್ಯವನ್ನು ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿಸಹಿತವಾಗಿ ಸುಡಲ್ಪಡಬೇಕು ಎಂದು ಹೇಳು ಎಂಬದೇ.


ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಆ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.


ಇಸ್ರಾಯೇಲ್ಯರು ಬೆಳಿಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು