ಯೆಹೋಶುವ 7:19 - ಕನ್ನಡ ಸತ್ಯವೇದವು J.V. (BSI)19 ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು. ಅಧ್ಯಾಯವನ್ನು ನೋಡಿ |
ಆಕಾನನು ಯೆಹೋಶುವನಿಗೆ - ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಆಶೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹುಗಿದಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ. ನಾನು ನಿಜವಾಗಿ ಇಂಥದನ್ನು ಮಾಡಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಉತ್ತರಕೊಟ್ಟನು.