Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:2 - ಕನ್ನಡ ಸತ್ಯವೇದವು J.V. (BSI)

2 ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು “ಆಯಿ” ಎಂಬ ಪಟ್ಟಣಕ್ಕೆ ಕಳುಹಿಸಿದನು. “ಆಯಿ” ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:2
18 ತಿಳಿವುಗಳ ಹೋಲಿಕೆ  

ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆಯಿಂದ ತೊಡಗಿ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬೈಲಿನಲ್ಲಿ ಮುಗಿಯುತ್ತದೆ.


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು.


ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಮಂತ್ರಾಲೋಚನೆಯಿಂದ ಯುದ್ಧವನ್ನು ನಡಿಸು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಅವನು ಅಲ್ಲಿಂದ ಹೊರಟು ಬೇತೇಲಿಗೆ ಮೂಡಲಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿಸಿ ಇಳುಕೊಂಡನು; ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರೂ ಇದ್ದವು. ಅಲ್ಲಿಯೂ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಜ್ಞಾನವಿಲ್ಲದರಾಗಿರದೆ ಜ್ಞಾನವಂತರಾಗಿರ್ರಿ.


ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ


ಯೆರಿಕೋವಿನ ಅರಸನು 1; ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸನು 1;


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಅಲ್ಲಿರುವ ಊರಿಗೆ ಮೊದಲು ಲೂಜ್ ಎಂದು ಹೆಸರಿತ್ತು.


ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.


ಬಹುಮಾನ ಹೊಂದಿದವರು ಯಾರಂದರೆ - ಬೇತೇಲಿನವರು, ದಕ್ಷಿಣಪ್ರಾಂತದ ರಾಮೋತಿನವರು, ಯತ್ತೀರಿನವರು,


ಹೆಷ್ಬೋನಿನವರೇ, ಗೋಳಾಡಿರಿ; ಆಯಿ ಎಂಬ ಊರು ಹಾಳಾಯಿತು! ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ ಇನ್ನೊಂದನ್ನು ದಾನಿಗೆ ಕಳುಹಿಸಿದನು.


ಇಗೋ, ಬಂದರು, ಅಯ್ಯಾಥಿನ ಮೇಲೆ ಬಂದಿದ್ದಾರೆ, ವಿುಗ್ರೋನನ್ನು ಹಾದುಹೋಗಿದ್ದಾರೆ, ವಿುಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು