Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 7:25 - ಕನ್ನಡ ಸತ್ಯವೇದವು J.V. (BSI)

25 ಅಲ್ಲಿ ಯೆಹೋಶುವನು ಅವನಿಗೆ - ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನೂ ಕಲ್ಲೆಸೆದು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 7:25
23 ತಿಳಿವುಗಳ ಹೋಲಿಕೆ  

ನೀವಾದರೋ ಯೆಹೋವನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವದನ್ನಾದರೂ ತೆಗೆದುಕೊಂಡರೆ ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ಕೆಟ್ಟೀತು.


ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯಿಂದ ಹುಟ್ಟಿದನು.


ಆ ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲುಗಳಿಂದ ಕೊಲ್ಲಬೇಕು.


ಆ ದೂಷಿಸಿದವನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ನಿಮ್ಮನ್ನು ಕಳವಳಪಡಿಸುವವರು ಅಂಗಚ್ಫೇದನೆಯನ್ನಾದರೂ ಮಾಡಿಕೊಂಡರೆ ವಾಸಿ.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲ್ಯರಲ್ಲಿ ಬುದ್ಧಿಹೀನಕಾರ್ಯವನ್ನು ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿಸಹಿತವಾಗಿ ಸುಡಲ್ಪಡಬೇಕು ಎಂದು ಹೇಳು ಎಂಬದೇ.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.


ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.


ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು


ಜನರು ಬಹಳವಾಗಿ ಬಳಲಿಹೋದದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ - ನನ್ನ ತಂದೆಯು ದೇಶಕ್ಕೆ ನಷ್ಟವನ್ನುಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.


ಇದನ್ನು ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಅಲ್ಲಿಂದ ಮುಂದೆ ಮಾಡದೆ ಇರುವರು.


ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು