ಯೆಹೋಶುವ 7:6 - ಕನ್ನಡ ಸತ್ಯವೇದವು J.V. (BSI)6 ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು. ಅಧ್ಯಾಯವನ್ನು ನೋಡಿ |