ಯೆಹೋಶುವ 8:14 - ಕನ್ನಡ ಸತ್ಯವೇದವು J.V. (BSI)14 ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಿಂದ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವದು ಅವನಿಗೆ ಗೊತ್ತಿದ್ದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬೆಳಿಗ್ಗೆ ಆಯಿ ಊರಿನರಸನು ಈ ಸಮಾಚಾರವನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತ ಇಸ್ರಯೇಲರ ಸಂಗಡ ಯುದ್ಧಮಾಡಲು ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಸ್ಥಳಕ್ಕೆ ಎದುರಾಗಿದ್ದ ಆ ಕಣಿವೆಗೆ ಬಂದರು. ನಗರದ ಹಿಂಭಾಗದಲ್ಲಿ ಹೊಂಚಿ ನೋಡುತ್ತಿರುವವರ ವಿಷಯ ಅವನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ತರುವಾಯ “ಆಯಿ”ಯ ಅರಸನು ಇಸ್ರೇಲರ ಸೈನ್ಯವನ್ನು ನೋಡಿದನು. ಅರಸನು ಮತ್ತು ಅವನ ಜನರು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಿ ಮುಗಿಸುವುದಕ್ಕಾಗಿ ತ್ವರೆಮಾಡಿ ಹೊರಟರು. “ಆಯಿ”ಯ ಅರಸನು ಪಟ್ಟಣದ ಪೂರ್ವಕ್ಕೆ ಹೋದನು. ಆದ್ದರಿಂದ ಅವನು ಪಟ್ಟಣದ ಹಿಂಭಾಗದಲ್ಲಿ ಅಡಗಿದ್ದ ಸೈನಿಕರನ್ನು ನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು. ಅಧ್ಯಾಯವನ್ನು ನೋಡಿ |