ಯೆಹೋಶುವ 8:19 - ಕನ್ನಡ ಸತ್ಯವೇದವು J.V. (BSI)19 ಅವನು ಕೈಯನ್ನು ಚಾಚಿದ ಕೂಡಲೆ ಹೊಂಚಿ ನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಚಾಚಿದ ಕೂಡಲೆ ಹೊಂಚುಗಾರರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ನಗರದೊಳಕ್ಕೆ ನುಗ್ಗಿ ಒಡನೆ ಬೆಂಕಿ ಹೊತ್ತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಡಗಿಕೊಂಡಿದ್ದ ಇಸ್ರೇಲಿನ ಜನರು ಇದನ್ನು ನೋಡಿ ಕೂಡಲೇ ತಾವು ಅಡಗಿದ್ದ ಸ್ಥಳದಿಂದ ಹೊರಬಂದು ವೇಗವಾಗಿ ಪಟ್ಟಣದ ಕಡೆಗೆ ಧಾವಿಸಿದರು. ಅವರು ಪಟ್ಟಣವನ್ನು ಪ್ರವೇಶಿಸಿ ಅದನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಹೊಂಚುಗಾರರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಪಟ್ಟಣದಲ್ಲಿ ಪ್ರವೇಶಿಸಿ, ಸೆರೆಹಿಡಿದು ಕೂಡಲೆ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಅಧ್ಯಾಯವನ್ನು ನೋಡಿ |