ಯೆಹೋಶುವ 8:20 - ಕನ್ನಡ ಸತ್ಯವೇದವು J.V. (BSI)20 ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶಕ್ಕೆ ಏರಿಹೋಗುವದನ್ನು ಕಂಡು ಯಾವ ಮಾರ್ಗದಿಂದಲಾದರೂ ತಪ್ಪಿಸಿಕೊಳ್ಳಲಾರದವರಾದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಯಿಯ ಜನರು ಹಿಂದಿರುಗಿ ನೋಡಿದಾಗ ನಗರದ ಹೊಗೆ ಆಕಾಶಕ್ಕೆ ಏರುತ್ತಿತ್ತು. ಯಾವ ಮಾರ್ಗದಿಂದಲೂ ಅವರಿಗೆ ತಪ್ಪಿಸಿಕೊಳ್ಳಲು ಆಗಲಿಲ್ಲ. ಏಕೆಂದರೆ ಅರಣ್ಯದ ಕಡೆಗೆ ಓಡಿಹೋಗುತ್ತಿದ್ದ ಇಸ್ರಯೇಲರು ಹಿಂದಟ್ಟಿ ಬರುವವರ ಕಡೆಗೆ ತಿರುಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು. ಅಧ್ಯಾಯವನ್ನು ನೋಡಿ |