ಯೆಹೋಶುವ 8:28 - ಕನ್ನಡ ಸತ್ಯವೇದವು J.V. (BSI)28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಯಾವ ಕಾಲಕ್ಕೂ ತಿರಿಗಿ ಕಟ್ಟಲ್ಪಡದಂತೆ ಹಾಳುದಿಬ್ಬವಾಗ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅನಂತರ ಯೆಹೋಶುವನು “ಆಯಿ” ನಗರವನ್ನು ಸುಟ್ಟುಹಾಕಿದನು. ಆ ನಗರವು ಕೇವಲ ಕಲ್ಲುಬಂಡೆಗಳ ದಿಬ್ಬವಾಯಿತು. ಅದು ಇಂದಿಗೂ ಹಾಗೆಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.