ಯೆಹೋಶುವ 8:30 - ಕನ್ನಡ ಸತ್ಯವೇದವು J.V. (BSI)30 ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ್ದಂತೆಯೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೂ ಯೆಹೋಶುವನು ಆ ಸಮಯದಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಉಳಿ ಮುಂತಾದವುಗಳನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರಿಗೆ ಆಜ್ಞಾಪಿಸಿದ್ದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಯಾವ ಕಬ್ಬಿಣವೂ ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.