ಯೆಹೋಶುವ 8:31 - ಕನ್ನಡ ಸತ್ಯವೇದವು J.V. (BSI)31 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಜನರು ಅದರ ಮೇಲೆ ಸರ್ವೇಶ್ವರನಿಗೆ ದಹನ ಹೋಮಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.