Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:4 - ಕನ್ನಡ ಸತ್ಯವೇದವು J.V. (BSI)

4 ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ - ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿಕೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:4
14 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚಿನೋಡುವದಕ್ಕೆ ಇರಿಸಿ


ನೀನು ಅವರ ಮಾತಿಗೆ ಒಡಂಬಡಬೇಡ; ಯಾಕಂದರೆ ನಾಲ್ವತ್ತಕ್ಕಿಂತ ಹೆಚ್ಚು ಮಂದಿ ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥವನ್ನು ಮಾಡಿಕೊಂಡು ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿನ್ನ ಅಪ್ಪಣೆಯನ್ನು ಎದುರುನೋಡುತ್ತಾ ಸಿದ್ಧವಾಗಿದ್ದಾರೆ ಅಂದನು.


ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು.


ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚಿ ನೋಡುತ್ತಿದ್ದನು.


ಸೇನಾಧೀಶ್ವರನಾದ ಯೆಹೋವನು ನಿನಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ತಾವು ಸೋತು ಹೋದೆವೆಂಬದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. (ಇಸ್ರಾಯೇಲ್ಯರು ತಾವು ಗಿಬೆಯದ ಸಮೀಪದಲ್ಲಿ ಹೊಂಚಿನೋಡುವದಕ್ಕೋಸ್ಕರ ಇಟ್ಟ ಜನರಲ್ಲಿ ಭರವಸವುಳ್ಳವರಾಗಿದ್ದದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.


ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‍ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರಿಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು


ಶೆಕೆವಿುನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲುಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.


ಆಯಿ ಎಂಬ ಊರಿನವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣಕ್ಕೆ ದೂರವಾಗಿ ಸೆಳೆಯಲ್ಪಟ್ಟರು.


ಆದರೆ ಕೊಳ್ಳೆಯನ್ನೂ ಪಶುಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂದುಗಡೆಯಲ್ಲಿ ಹೊಂಚುಹಾಕಿಕೊಂಡಿರಲಿ ಎಂದು ಆಜ್ಞಾಪಿಸಲು ಅವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವದಕ್ಕೋಸ್ಕರ ಸಿದ್ಧನಾಗಿ


ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ - ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆಂಬದನ್ನು ಅವರು ಬಲ್ಲರು. ಆದದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ ಅಂದನು.


ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.


ಆದದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು