ಯೆಹೋಶುವ 8:5 - ಕನ್ನಡ ಸತ್ಯವೇದವು J.V. (BSI)5 ಪಟ್ಟಣಕ್ಕೆ ಬಹು ದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರ್ರಿ. ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನು ಮತ್ತು ನನ್ನ ಸಂಗಡದವರೆಲ್ಲರು ನಗರದ ಸಮೀಪಕ್ಕೆ ಹೋಗುತ್ತೇವೆ. ಆಯಿಯ ಜನರು ಮುಂಚಿನಂತೆ ನಮ್ಮೊಡನ ಯುದ್ಧಕ್ಕೆ ಬರುವರು. ಕೂಡಲೆ ನಾವು ಅಲ್ಲಿಂದ ಓಡಿಹೋಗುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ನನ್ನ ಸಂಗಡವಿರುವ ಜನರನ್ನು ಕರೆದುಕೊಂಡು ಪಟ್ಟಣದ ಕಡೆಗೆ ಹೋಗುತ್ತೇನೆ. ಪಟ್ಟಣದೊಳಗಿರುವ ಜನರು ನಮ್ಮ ಸಂಗಡ ಕಾದಾಡಲು ಹೊರಗೆ ಬರುತ್ತಾರೆ. ನಾವು ಮುಂಚಿನಂತೆ ಹಿಂತಿರುಗಿ ಅಲ್ಲಿಂದ ಓಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ನಾನೂ, ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಸೇರುವೆವು. ಆಗ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು. ಅಧ್ಯಾಯವನ್ನು ನೋಡಿ |