Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:11 - ಕನ್ನಡ ಸತ್ಯವೇದವು J.V. (BSI)

11 ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು - ನಾವು ನಿಮ್ಮ ಸೇವಕರು; ನೀವು ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂಬದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ನಮ್ಮನ್ನು ಇಲ್ಲಿಗೆ ಕಳಿಸುತ್ತಾ, ‘ನೀವು ಪ್ರಯಾಣಕ್ಕಾಗಿ ಬುತ್ತಿ ಕಟ್ಟಿಕೊಂಡು ಹೋಗಿ ಇಸ್ರಯೇಲರನ್ನು ಎದುರುಗೊಳ್ಳಿ - ನಾವು ನಿಮ್ಮ ಸೇವಕರು, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಿ ಎಂದು ವಿನಂತಿಸಿ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಮ್ಮ ಹಿರಿಯರು ಮತ್ತು ನಮ್ಮ ಜನರು ನಮಗೆ, ‘ನಿಮ್ಮ ಪ್ರಯಾಣಕ್ಕೆ ಸಾಕಷ್ಟು ಆಹಾರವನ್ನು ತೆಗೆದುಕೊಂಡು ಹೋಗಿ ಇಸ್ರೇಲರನ್ನು ಭೇಟಿಮಾಡಿ, ನಾವು ನಿಮ್ಮ ಸೇವಕರು. ನಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಿರಿ ಎಂದು ಅವರಿಗೆ ತಿಳಿಸಿ’ ಎಂಬುದಾಗಿ ಹೇಳಿ ನಮ್ಮನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:11
9 ತಿಳಿವುಗಳ ಹೋಲಿಕೆ  

ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನವುಂಟಾಯಿತು; ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಅವರು ಯೆಹೋಶುವನಿಗೆ - ನಾವು ನಿನ್ನ ದಾಸರಾಗಿದ್ದೇವೆನ್ನಲು ಅವನು ಅವರನ್ನು - ನೀವು ಯಾರು, ಎಲ್ಲಿಯವರು ಎಂದು ಕೇಳಿದನು.


ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ, ಕೋಲು ಹಸಿಬೆ ಬುತ್ತಿ ಹಣ ಬೇಡ; ಎರಡಂಗಿಗಳಿರಬಾರದು.


ನೀವು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ - ನೀವು ಇನ್ನು ಮೂರು ದಿವಸಗಳಲ್ಲಿ ಈ ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶವನ್ನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗಬೇಕು. ಆದದರಿಂದ ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ ಎಂದು ಹೇಳಬೇಕು ಅಂದನು.


ಅದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ತೆಗೆದುಕೊಂಡು ಹೋಗಿರಿ; ಒಂದು ವೇಳೆ ಅದು ಅವರಿಗೆ ತಿಳಿಯದೆ ನಿಮ್ಮ ಕೈಗೆ ಬಂದಿರಬಹುದು.


ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಮಾಡಿದ್ದೆಲ್ಲವನ್ನೂ ಕೇಳಿ -


ನಾವು ನಿಮ್ಮನ್ನು ಎದುರುಗೊಳ್ಳುವದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು; ಈಗ ಒಣಗಿ ಚೂರುಚೂರಾಗಿದೆ ನೋಡಿರಿ.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲಾ ಕೂಡಿ ಯೇಹುವಿಗೆ - ನಾವು ನಿನ್ನ ಆಜ್ಞಾಧಾರಕರಾದ ಸೇವಕರು; ನಾವಾಗಿ ನಮಗೊಬ್ಬ ಅರಸನನ್ನು ನೇವಿುಸಿಕೊಳ್ಳುವದಿಲ್ಲ; ನಿನ್ನ ಚಿತ್ತವೇ ನೆರವೇರಲಿ ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು