ಯೆಹೋಶುವ 9:24 - ಕನ್ನಡ ಸತ್ಯವೇದವು J.V. (BSI)24 ಅವರು ಯೆಹೋಶುವನಿಗೆ - ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ - ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿಬಿಡಬೇಕೆಂದು ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು. ಅಧ್ಯಾಯವನ್ನು ನೋಡಿ |