Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:25 - ಕನ್ನಡ ಸತ್ಯವೇದವು J.V. (BSI)

25 ಇಗೋ, ಈಗ ನಾವು ನಿನ್ನ ಕೈಯಲ್ಲಿರುತ್ತೇವೆ; ನಿನಗೆ ಒಳ್ಳೇದೆಂದೂ ನ್ಯಾಯವೆಂದೂ ತೋರುವದನ್ನು ನಮಗೆ ಮಾಡು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಗೋ, ಈಗಲೂ ನಾವು ನಿನ್ನ ಕೈಯಲ್ಲಿಯೇ ಇದ್ದೇವೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿಯೂ, ಸರಿಯಾಗಿಯೂ ತೋಚುವ ಹಾಗೆ ನಮಗೆ ಮಾಡು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:25
12 ತಿಳಿವುಗಳ ಹೋಲಿಕೆ  

ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳೆ; ಮನಸ್ಸುಬಂದಂತೆ ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.


ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವದನ್ನು ನನಗೆ ಮಾಡಿರಿ.


ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು.


ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ಸಮುವೇಲನು ಒಂದನ್ನೂ ಮುಚ್ಚದೆ ಎಲ್ಲವನ್ನೂ ತಿಳಿಸಿದನು; ಏಲಿಯು ಅದನ್ನು ಕೇಳಿ - ಆತನು ಯೆಹೋವನು; ತನಗೆ ಸರಿಕಾಣುವದನ್ನು ಮಾಡಲಿ ಅಂದನು.


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ - ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ ಎಂದು ನನ್ನನ್ನು ನಿಂದಿಸಿದಿರಲ್ಲಾ;


ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಸಂಹೃತರಾಗದಂತೆ ತಪ್ಪಿಸಿ


ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲಾ ಕೂಡಿ ಯೇಹುವಿಗೆ - ನಾವು ನಿನ್ನ ಆಜ್ಞಾಧಾರಕರಾದ ಸೇವಕರು; ನಾವಾಗಿ ನಮಗೊಬ್ಬ ಅರಸನನ್ನು ನೇವಿುಸಿಕೊಳ್ಳುವದಿಲ್ಲ; ನಿನ್ನ ಚಿತ್ತವೇ ನೆರವೇರಲಿ ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು