ಯೆಹೋಶುವ 9:27 - ಕನ್ನಡ ಸತ್ಯವೇದವು J.V. (BSI)27 ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |