Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:5 - ಕನ್ನಡ ಸತ್ಯವೇದವು J.V. (BSI)

5 ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿ ಹರಿದ ಹಳೆಯ ಕೆರಗಳನ್ನು ಮೆಟ್ಟಿ ಹಳೆಯ ಬಟ್ಟೆಗಳನ್ನು ಹೊದೆದು ಒಣರೊಟ್ಟೀ ಚೂರುಗಳನ್ನು ಬುತ್ತೀ ಕಟ್ಟಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಹಳೆಯ ಪಾದರಕ್ಷೆಗಳನ್ನು ಮೆಟ್ಟಿಕೊಂಡರು; ಹಳೆಯ ಬಟ್ಟೆಗಳನ್ನು ಧರಿಸಿಕೊಂಡರು; ಒಣಗಿದ ಮತ್ತು ಕೆಟ್ಟುಹೋದ ರೊಟ್ಟಿಗಳನ್ನು ಕಟ್ಟಿಕೊಂಡರು. ಹೀಗೆ ಅವರು ಬಹುದೂರ ಪ್ರಯಾಣಮಾಡಿ ಬಂದವರಂತೆ ತೋರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತೇಪೆ ಹಾಕಿದ ಹಳೆಯದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು ಹಳೆಯ ಬಟ್ಟೆಗಳನ್ನು ತೊಟ್ಟುಕೊಂಡು, ಒಣಗಿ ಬೂಷ್ಟು ಹಿಡಿದ ರೊಟ್ಟಿಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:5
7 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸವಾಗಿದ್ದವು; ಈಗ ಹರಿದವೆ. ನಮ್ಮ ಬಟ್ಟೆ ಕೆರಗಳು ದೀರ್ಘಪ್ರಯಾಣದಿಂದ ಹಳೆಯವಾದವು ಅಂದರು.


ನಿಮ್ಮ ಕೋಟೆಯ ಬಾಗಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರುವವು; ನೀವು ಇರುವವರೆಗೂ ನಿಮಗೆ ಬಲವು ಇರುವದು.


ನಾಲ್ಪತ್ತು ವರುಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡಿಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ ಕಾಲಲ್ಲಿದ್ದ ಕೆರವಾಗಲಿ ಜೀರ್ಣವಾಗಲಿಲ್ಲ;


ಹೇಗಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣೀತಟ್ಟುಗಳನ್ನು ಹಾಕಿ, ಅವುಗಳ ಮೇಲೆ ಹರಿದುಹೋಗಿ ಕಟ್ಟಲ್ಪಟ್ಟಿರುವ


ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದು ಅವನಿಗೂ ಇಸ್ರಾಯೇಲ್ಯರಿಗೂ - ನಾವು ದೂರದೇಶದಿಂದ ಬಂದೆವು; ನೀವು ನಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳಿರಿ ಎಂದು ಹೇಳಿದರು.


ನಾವು ನಿಮ್ಮನ್ನು ಎದುರುಗೊಳ್ಳುವದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು; ಈಗ ಒಣಗಿ ಚೂರುಚೂರಾಗಿದೆ ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು