Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:6 - ಕನ್ನಡ ಸತ್ಯವೇದವು J.V. (BSI)

6 ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದು ಅವನಿಗೂ ಇಸ್ರಾಯೇಲ್ಯರಿಗೂ - ನಾವು ದೂರದೇಶದಿಂದ ಬಂದೆವು; ನೀವು ನಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಇಸ್ರೇಲರ ಪಾಳೆಯಕ್ಕೆ ಹೋದರು. ಈ ಪಾಳೆಯವು ಗಿಲ್ಗಾಲಿನ ಹತ್ತಿರ ಇತ್ತು. ಅವರು ಯೆಹೋಶುವನ ಬಳಿಗೆ ಹೋಗಿ ಅವನಿಗೆ, “ನಾವು ಬಹುದೂರ ದೇಶದಿಂದ ಪ್ರಯಾಣ ಮಾಡಿ ಬಂದಿದ್ದೇವೆ. ನಾವು ನಿಮ್ಮ ಜೊತೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಇಚ್ಛಿಸುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:6
9 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ಇಳುಕೊಂಡಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕ ಹಬ್ಬವನ್ನು ಆಚರಿಸಿ


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದವರು ಎಂದು ಉತ್ತರ ಕೊಟ್ಟನು.


ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವದು.


ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.


ಅದಕ್ಕೆ ಅವರು - ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮಮಹತ್ತಿನ ನಿವಿುತ್ತ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಆತನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನೂ


ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿ ಹರಿದ ಹಳೆಯ ಕೆರಗಳನ್ನು ಮೆಟ್ಟಿ ಹಳೆಯ ಬಟ್ಟೆಗಳನ್ನು ಹೊದೆದು ಒಣರೊಟ್ಟೀ ಚೂರುಗಳನ್ನು ಬುತ್ತೀ ಕಟ್ಟಿಕೊಂಡು


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನನ್ನು ದಾಟಿ ಯೆರಿಕೋವಿನ ಪೂರ್ವ ಪ್ರಾಂತದಲ್ಲಿರುವ ಗಿಲ್ಗಾಲೆಂಬಲ್ಲಿ ಇಳುಕೊಂಡರು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿ - ನಿನ್ನ ಸೇವಕರನ್ನು ಕೈಬಿಡಬೇಡ; ಬೇಗ ಬಂದು ಸಹಾಯಮಾಡು; ನಮಗೆ ವಿರೋಧವಾಗಿ ಕೂಡಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸು ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು