Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:9 - ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ಅವರು - ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮಮಹತ್ತಿನ ನಿವಿುತ್ತ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಆತನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:9
21 ತಿಳಿವುಗಳ ಹೋಲಿಕೆ  

ಅವರು ಯೆಹೋಶುವನಿಗೆ - ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ - ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿಬಿಡಬೇಕೆಂದು ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು; ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಮೆರೆಯುತ್ತದೆ.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವದು.


ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನು ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿನ್ನ ವಿಷಯದಲ್ಲಿ -


ಜನಾಂಗಗಳು ಇದನ್ನು ಕೇಳಿ ನಡುಗುತ್ತಿರುವವು;


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಯಾಕಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥಮಾಡಲ್ಪಟ್ಟರು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.


ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಮಾಡಿದ್ದೆಲ್ಲವನ್ನೂ ಕೇಳಿ -


ಒಡಂಬಡಿಕೆಯಾದ ಮೂರು ದಿನಗಳ ಮೇಲೆ ಅವರು ಹತ್ತಿರದವರೂ ತಮ್ಮ ಮಧ್ಯದಲ್ಲಿಯೇ ವಾಸಿಸುವವರೂ ಆಗಿದ್ದಾರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.


ಹೇಗಂದರೆ - ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಸೇರಿದಂಥ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳು ಅವರವೇ ಆಗಿದ್ದವು.


ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.


ಐಗುಪ್ತ ದೇಶದ ಸೋನ್ ಸೀಮೆಯಲ್ಲಿ ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು