ಯೋನನು 1:17 - ಕನ್ನಡ ಸತ್ಯವೇದವು J.V. (BSI)17 ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು. ಅಧ್ಯಾಯವನ್ನು ನೋಡಿ |