Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:3 - ಕನ್ನಡ ಸತ್ಯವೇದವು J.V. (BSI)

3 ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:3
35 ತಿಳಿವುಗಳ ಹೋಲಿಕೆ  

ಗತ್‍ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.


ಕಾಯಿನನು ಯೆಹೋವನ ಸನ್ನಿಧಾನದಿಂದ ಹೊರಟು ನೋದು ಎಂಬ ದೇಶದಲ್ಲಿ ವಾಸಿಸಿದನು; ಅದು ಏದೆನ್ ಸೀಮೆಗೆ ಮೂಡಲಲ್ಲಿರುವದು.


ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸದವರೆಗೂ ಇದ್ದನು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ಕರಾವಳಿಯ ನಿವಾಸಿಗಳೇ, ಅಂಗಲಾಚಿರಿ!


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಆ ದಿನದಲ್ಲಿ ಆತನು ತನ್ನ ಪವಿತ್ರರ ಮೂಲಕ ಪ್ರಭಾವ ಹೊಂದುವವನಾಗಿಯೂ ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವವನಾಗಿಯೂ ಬರುವಾಗ ಅಂಥವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ


ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ ಕಬ್ಬಿಣ ತವರ ಸೀಸಗಳನ್ನು ನಿನಗೆ ಒದಗಿಸಿದರು.


ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ದೇಶವನ್ನು ಆವರಿಸು; ನಡುಕಟ್ಟು [ಸಡಲಿತು], ಇನ್ನಿಲ್ಲ.


ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು.


ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು.


ಯೇಸು ಅವನಿಗೆ - ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನು ಹಾಕಿ ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು ಹೇಳಿದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.


ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.


ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಹಡಗುಹತ್ತಿ ಸಮುದ್ರಪ್ರಯಾಣಮಾಡುತ್ತಾ ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡಿಸುವವರು


ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವು ಊಫಜಿನಿಂದಲೂ ಸಾಗಿಬರುತ್ತವೆ; ನೀಲಧೂಮ್ರವಸ್ತ್ರಗಳು ಅವುಗಳ ಉಡುಪಾಗಿವೆ; ಇವೆಲ್ಲಾ ಕುಶಲರ ಕೌಶಲ್ಯ.


ಇವನು ಯೆಹೋವನ ಸನ್ನಿಧಿಯಿಂದ ಓಡಿಬಂದವನು ಎಂಬದನ್ನು ಅವನು ಮೊದಲು ಹೇಳಿದ ಒಂದು ಮಾತಿನಿಂದ ಆ ಜನರು ತಿಳುಕೊಂಡಿದ್ದರು. ಈಗ ಇದನ್ನೂ ಕೇಳಿ ಬಹಳವಾಗಿ ಹೆದರಿ - ಇದೇನು ನೀನು ಮಾಡಿದ್ದು ಅಂದರು.


ಈಗ ನನ್ನ ಒಡೆಯನು ತಾನು ಮಾತುಕೊಟ್ಟ ಮೇರೆಗೆ ಗೋದಿ ಜವೆಗೋದಿ ಎಣ್ಣೆ ದ್ರಾಕ್ಷಾರಸ ಇವುಗಳನ್ನು ತನ್ನ ದಾಸರಿಗೆ ಕಳುಹಿಸಬೇಕು.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ ಬೆಳ್ಳಿ ದಂತ ಕಪಿ ನವಿಲು ಇವುಗಳನ್ನು ತರುತ್ತಿದ್ದವು.


ಇದಲ್ಲದೆ ಆತನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಿರಬೇಡ; ನಾನು ಕೊಡುವದನ್ನು ಬಾಯಿತೆರೆದು ತಿಂದುಬಿಡು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು