ಯೋನನು 1:5 - ಕನ್ನಡ ಸತ್ಯವೇದವು J.V. (BSI)5 ಆಗ ನಾವಿಕರು ಹೆದರಿ ತಮ್ಮ ತಮ್ಮ ದೇವರುಗಳಿಗೆ ಮೊರೆಯಿಟ್ಟು ತಮ್ಮ ಕಷ್ಟವು ಕಡಿಮೆಯಾಗುವ ಹಾಗೆ ಹಡಗಿನ ಸಾಮಾನುಗಳನ್ನು ಸಮುದ್ರಕ್ಕೆ ಬಿಸಾಟುಬಿಟ್ಟರು. ಇಷ್ಟರೊಳಗೆ ಯೋನನು ಹಡಗಿನ ಒಳಭಾಗಕ್ಕೆ ಇಳಿದು ಮಲಗಿಕೊಂಡಿದ್ದನು; ಗಾಢನಿದ್ರೆ ಹತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು. ಅಧ್ಯಾಯವನ್ನು ನೋಡಿ |