Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:7 - ಕನ್ನಡ ಸತ್ಯವೇದವು J.V. (BSI)

7 ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:7
18 ತಿಳಿವುಗಳ ಹೋಲಿಕೆ  

ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನಂದರೆ - ಏಳು, ನೀನು ಈ ಪ್ರಕಾರ ಬೋರಲಬಿದ್ದಿರುವದೇಕೆ?


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.


ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;


ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲುಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.


ಅರಸನಾದ ಅಹಷ್ವೇರೋಷನ [ಆಳಿಕೆಯ] ಹನ್ನೆರಡನೆಯ ವರುಷದ ಮೊದಲನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿವಸವೂ ಯಾವವೆಂದು ತಿಳಿದುಕೊಳ್ಳುವದಕ್ಕೆ ಪೂರನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು