Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:4 - ಕನ್ನಡ ಸತ್ಯವೇದವು J.V. (BSI)

4 ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು - ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:4
10 ತಿಳಿವುಗಳ ಹೋಲಿಕೆ  

ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು; ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಹೇಗೆಂದರೆ ಯೋನನು ನಿನವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.


ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು