ಯೋನನು 3:5 - ಕನ್ನಡ ಸತ್ಯವೇದವು J.V. (BSI)5 ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಗೊತ್ತುಮಾಡಿ ಸಾರಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನೆವೆಯ ಜನರು ದೇವರಿಂದ ಬಂದ ಸಂದೇಶವನ್ನು ನಂಬಿದರು. ಆ ಜನರು ತಮ್ಮ ಪಾಪಗಳ ಕುರಿತು ಯೋಚಿಸಲು ಉಪವಾಸ ಮಾಡಿದರು. ತಮ್ಮ ಪಶ್ಚಾತ್ತಾಪಕ್ಕೆ ಗುರುತಾಗಿ ಶೋಕವಸ್ತ್ರವನ್ನು ಧರಿಸಿದರು. ನಗರದ ಎಲ್ಲಾ ಜನರು ಹೀಗೆ ಮಾಡಿದರು. ಉನ್ನತ ಅಧಿಕಾರಿಗಳಿಂದ ಹಿಡಿದು ಕೀಳು ಜನರ ತನಕ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು. ಅಧ್ಯಾಯವನ್ನು ನೋಡಿ |