Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:9 - ಕನ್ನಡ ಸತ್ಯವೇದವು J.V. (BSI)

9 ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:9
14 ತಿಳಿವುಗಳ ಹೋಲಿಕೆ  

ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದೀ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದೀ.


ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೂ [ಕೋಪ ಮಾಡುವಿ]? ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ ಇಸ್ರಾಯೇಲ್‍ದೇವರಿಗೆ ಬಹುಮಾನವಾಗಿ ಕೊಟ್ಟರೆ ಆತನ ಶಿಕ್ಷಾಹಸ್ತವು ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಪ್ರಾಂತಗಳನ್ನೂ ಬಿಟ್ಟುಹೋದೀತು.


ಯೆಹೋವನೇ, ನಿನ್ನ ಚಿತ್ತಾನುಸಾರ ಮಾಡಿದಿಯಲ್ಲಾ ಎಂದು ಬಿನ್ನವಿಸಿ ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ತನ್ನ ರೌದ್ರವನ್ನು ನಿಲ್ಲಿಸಿಬಿಟ್ಟಿತು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು