Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:2 - ಕನ್ನಡ ಸತ್ಯವೇದವು J.V. (BSI)

2 ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:2
24 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಯೆಹೋವನು ದಯೆಯೂ ಕನಿಕರವೂ ಉಳ್ಳವನು; ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.


ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.


ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ಕರ್ತನಾದ ಯೆಹೋವನು ಮನಮರುಗಿ ಈ ದರ್ಶನವೂ ನೆರವೇರದು ಅಂದನು.


ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೂ [ಕೋಪ ಮಾಡುವಿ]? ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ.


ಯೆಹೋವನು ಕನಿಕರವೂ ದಯೆಯೂ ದೀರ್ಘಶಾಂತಿಯೂ ಪೂರ್ಣಪ್ರೀತಿಯೂ ಉಳ್ಳವನು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು