Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:4 - ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಯೆಹೋವನು - ನೀನು ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಸರ್ವೇಶ್ವರ, “ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಅವನಿಗೆ, “ನಾನು ಆ ಜನರನ್ನು ನಾಶಮಾಡದೆ ಹೋದುದರಿಂದ ನೀನು ಸಿಟ್ಟುಗೊಳ್ಳುವದು ಸರಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:4
13 ತಿಳಿವುಗಳ ಹೋಲಿಕೆ  

ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.


ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು, ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿ ಹೇಳು.


ಆರೋನನು ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಕೂಡದು.


ಆಗ ಯೆಹೋವನು ಅವನಿಗೆ - ಯಾಕೆ ಕೋಪಿಸಿಕೊಂಡಿ? ನಿನ್ನ ತಲೆ ಯಾಕೆ ಬೊಗ್ಗಿತು?


ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕೀತು, ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!


ಇದರಿಂದ ಯೋನನಿಗೆ ಬಹು ಕರಕರೆಯಾಯಿತು;


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಲಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕೂತುಕೊಂಡಿದ್ದನು.


ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು