Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:10 - ಕನ್ನಡ ಸತ್ಯವೇದವು J.V. (BSI)

10 ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:10
29 ತಿಳಿವುಗಳ ಹೋಲಿಕೆ  

ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ನನ್ನ ಆಸ್ತಿ ದೊಡ್ಡದೆಂದೂ ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ನಮ್ಮ ಯೆಹೋವದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲಪಡಿಸು.


ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲುಗೋಡೆಯಂತಿದ್ದರು.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;


ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು; ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೋಡಿ ಎತ್ತುಗಳೂ ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಇದು ನಿನ್ನ ತಂದೆಯ ದೇವರಿಂದಾಯಿತು, ಆತನು ನಿನಗೆ ಸಹಾಯ ಮಾಡಲಿ; ಸರ್ವಶಕ್ತನಾದ ದೇವರಿಂದಾಯಿತು,ಅತನು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಣ ಆಕಾಶದಿಂದಲೂ ಕೆಳಗಣ ಸಾಗರದ ಸೆಲೆಗಳಿಂದಲೂ ಸ್ತನ್ಯದಿಂದಲೂ ಗರ್ಭದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


ಯಾಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ದೊಡ್ಡ ಹಿಂಡುಗಳೂ ದಾಸದಾಸಿಯರೂ ಒಂಟೆಕತ್ತೆಗಳೂ ಹೇರಳವಾಗಿದ್ದವು.


ನಾನು ಬರುವದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ; ಈಗ ಬಹಳವಾಗಿ ಹೆಚ್ಚಾಯಿತು. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ.


ನೀನು ಅದರ ಬೇಲಿಯನ್ನೇಕೆ ಕಿತ್ತು ಹಾಕಿದಿ? ದಾರಿಗರೆಲ್ಲರು ಅದನ್ನು ತರೆದುಬಿಡುತ್ತಾರೆ.


ಆದಕಾರಣ ನಿನ್ನನ್ನು ಮರೆಹೊಕ್ಕವರೆಲ್ಲರು ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.


ನನ್ನ ಹೆಜ್ಜೆಗಳು ಮೊಸರಿನಲ್ಲಿ ಮುಣುಗುತ್ತಿದ್ದವು, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರೋಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಶ್ವಾಸಬಿಡದಂತೆ ಮಾಡು.


ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗುತ್ತಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು