Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:11 - ಕನ್ನಡ ಸತ್ಯವೇದವು J.V. (BSI)

11 ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:11
21 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ; ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.


ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.


ಈಗಲಾದರೋ ನಿನಗೇ [ಶ್ರಮೆ] ಬಂತು. ಅದರಿಂದ ನೀನು ಬೇಸರಗೊಂಡಿರುವಿ, ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.


ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ - ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ದೇವರನ್ನು ದೂಷಿಸಿ ಸಾಯಿ ಎಂದು ಹೇಳಿದಳು.


ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣದಂಡನೆಯಾಗುವದು ಎಂದು ಆಜ್ಞೆಮಾಡಿದನು.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ


ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.


ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು