12 ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.
12 ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.
12 ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.
12 ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.
12 ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.
ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು - ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.
ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.