Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:17 - ಕನ್ನಡ ಸತ್ಯವೇದವು J.V. (BSI)

17 ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:17
8 ತಿಳಿವುಗಳ ಹೋಲಿಕೆ  

ಹಾರಾನನು ಲೋಟನನ್ನು ಪಡೆದನು. ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಹತ್ತಿರವೇ ಸತ್ತನು.


ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಎಂದು ಹೇಳಿದನು.


ದಾವೀದನು ಅವನನ್ನು - ನೀನು ಎಲ್ಲಿಂದ ಬಂದಿ ಎಂದು ಕೇಳಲು ಅವನು - ನಾನು ಇಸ್ರಾಯೇಲ್ಯರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆನು ಎಂದು ಉತ್ತರಕೊಟ್ಟನು.


ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನಗೆ ಮೊಮ್ಮಗನೂ ಹಾರಾನನಿಗೂ ಮಗನೂ ಆಗಿರುವ ಲೋಟನನ್ನೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರಕೊಂಡು ಕಾನಾನ್‍ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟನು. ಅವರು ಹಾರಾನ್ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಸಂಗಡಲೇ ಬೇರೊಬ್ಬನು ಬಂದು ನಿನ್ನ ಕುಮಾರ ಕುಮಾರ್ತೆಯರು ತಮ್ಮ ಅಣ್ಣನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ


ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು