Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:18 - ಕನ್ನಡ ಸತ್ಯವೇದವು J.V. (BSI)

18 ಸಂಗಡಲೇ ಬೇರೊಬ್ಬನು ಬಂದು ನಿನ್ನ ಕುಮಾರ ಕುಮಾರ್ತೆಯರು ತಮ್ಮ ಅಣ್ಣನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ವರದಿಮಾಡುತ್ತಿದ್ದಾಗಲೇ ಬೇರೊಬ್ಬನು ಬಂದು, “ನಿಮ್ಮ ಪುತ್ರಪುತ್ರಿಯರು ಹಿರಿಯಣ್ಣನ ಮನೆಯಲ್ಲಿ ಔತಣದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇವನು ಇನ್ನೂ ಮಾತನಾಡುತ್ತಿರಲು, ಮತ್ತೊಬ್ಬ ದೂತನು ಬಂದು, “ನಿನ್ನ ಪುತ್ರ ಪುತ್ರಿಯರೂ ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸ ಕಡಿಯುತ್ತಾ ಔತಣ ಮಾಡುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:18
17 ತಿಳಿವುಗಳ ಹೋಲಿಕೆ  

ಅವನ ಕುಮಾರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡಿಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.


ಒಂದಾನೊಂದು ದಿವಸದಲ್ಲಿ ಯೋಬನ ಗಂಡು ಹೆಣ್ಣುಮಕ್ಕಳು ಹಿರಿಯವನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಓಡಾಳುಗಳೂ ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ ಅರಸನನ್ನು ಸೇರಿ ಅವನಿಗೆ - ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರವಿುಸಿದ್ದಾರೆ,


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು;


ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ ಆ ನನ್ನ ಮೂಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?


ನನ್ನನ್ನು ಒಡೆದೊಡೆದು ಶಿಥಿಲಪಡಿಸಿ ಶೂರನ ಹಾಗೆ ನನ್ನ ಮೇಲೆ ಓಡಿಬರುತ್ತಾನೆ.


ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪಮಾಡಿದ್ದ ಕಾರಣ ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಅಷ್ಟರಲ್ಲಿ ಇನ್ನೊಬ್ಬನು ಬಂದು ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತಮಾಡಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಇಗೋ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು; ಮನೆಯು ಯೌವನಸ್ಥರ ಮೇಲೆ ಬಿದ್ದಿತು; ಸತ್ತು ಹೋದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು