Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:21 - ಕನ್ನಡ ಸತ್ಯವೇದವು J.V. (BSI)

21 ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:21
35 ತಿಳಿವುಗಳ ಹೋಲಿಕೆ  

ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿಹೋಗುವನು; ಅವನು ಪ್ರಯಾಸಪಟ್ಟದ್ದಕ್ಕೆಲ್ಲಾ ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗನು.


ನಾವು ಲೋಕದೊಳಕ್ಕೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಆಗ ಯೋಬನು ಆಕೆಗೆ - ಮೂರ್ಖಳು ಮಾತಾಡಿದಂತೆ ನೀನು ಮಾತಾಡುತ್ತೀ; ದೇವರ ಹಸ್ತದಿಂದ ನಾವು ಒಳ್ಳೇದನ್ನು ಹೊಂದುತ್ತೇವಷ್ಟೆ; ಕೆಟ್ಟದ್ದನ್ನು ಹೊಂದಬಾರದೋ ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತೊಂದೂ ಅವನ ತುಟಿಗಳಿಂದ ಹೊರಡಲಿಲ್ಲ.


ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವದಿಲ್ಲ.


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ಪರಾತ್ಪರನ ಬಾಯಿಮಾತಿನಿಂದಲೇ ಮೇಲು ಕೇಡುಗಳೆರಡೂ ಸಂಭವಿಸುತ್ತವಲ್ಲಾ.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾವನಿಗೆ ವಿರುದ್ಧವಾಗಿ ನಾವು ದ್ರೋಹ ಮಾಡಿದೆವೋ ಆ ಯೆಹೋವನಲ್ಲವೇ. ಆತನ ಜನರು ಆತನ ಮಾರ್ಗಗಳಲ್ಲಿ ನಡೆಯಲೊಲ್ಲದೆ ಆತನ ಉಪದೇಶವನ್ನು ಕೇಳದೆ ಹೋದರಷ್ಟೆ.


ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವದು.


ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಸಮುವೇಲನು ಒಂದನ್ನೂ ಮುಚ್ಚದೆ ಎಲ್ಲವನ್ನೂ ತಿಳಿಸಿದನು; ಏಲಿಯು ಅದನ್ನು ಕೇಳಿ - ಆತನು ಯೆಹೋವನು; ತನಗೆ ಸರಿಕಾಣುವದನ್ನು ಮಾಡಲಿ ಅಂದನು.


ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು.


ಮತ್ತೂ ಆತನು ಯಾವನಿಗೆ ಆಸ್ತಿಪಾಸ್ತಿಗಳನ್ನು ದಯಪಾಲಿಸುವದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ.


ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.


ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ಅವನು ಆಕೆಯ ಮೇಲೆ ಕೋಪಗೊಂಡು - ದೇವರು ನಿನಗೆ ಮಕ್ಕಳನ್ನು ಕೊಡದೆಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ ಅಂದನು.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.


ಭಾಗ್ಯವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಬರಮಾಡಿದನು. ಯೆಹೋವನು ನನಗೆ ವಿರೋಧವಾಗಿ ಸಾಕ್ಷಿಹೇಳಿದ್ದಾನೆ; ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಇದರಿಂದ ನೀವು ನನ್ನನ್ನು ನೊವೊವಿುಯೆಂದು ಕರೆಯುವದು ಹೇಗೆ ಅಂದಳು.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ನೀನು ಏನು ಮಾಡುತ್ತಿ ಎಂದು ಆತನನ್ನು ಕೇಳುವವರಾರು?


ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವದು; ಇದನ್ನು ದೀನರು ಕೇಳಿ ಸಂತೋಷಿಸುವರು.


ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವದು; ಅವನಿಗೆ ಮಗನಿದ್ದರೆ [ಆ ಮಗನಿಗಾಗಿ] ಅವನ ಕೈಯಲ್ಲಿ ಏನೂ ಇರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು