Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಸೈತಾನನನ್ನು - ಎಲ್ಲಿಂದ ಬಂದಿ ಎಂದು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:7
9 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಯೆಹೋವನು - ಎಲ್ಲಿಂದ ಬಂದಿ ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ - ಭೂಲೋಕದಲ್ಲಿ ಸಂಚರಿಸುತ್ತಾ ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು ಅಂದನು.


ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.


ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಅವನು - ಹೊರಡಿರಿ, ಲೋಕದಲ್ಲಿ ಸಂಚರಿಸಿರಿ ಎಂದಪ್ಪಣೆಮಾಡಲು ಅವು ಲೋಕದಲ್ಲಿ ಸಂಚರಿಸಿದವು.


ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು