8 ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.
8 ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.
8 ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.
8 ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.
8 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.
ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.
ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ.
ಆ ಪುರುಷನು ನನಗೆ - ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವದನ್ನು ನೀನು ನೋಡಬೇಕೆಂದೇ ಇಲ್ಲಿಗೆ ತರಲ್ಪಟ್ಟಿ; ನೀನು ನೋಡುವದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು ಎಂದು ಹೇಳಿದನು.
ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.