Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:9 - ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ಸೈತಾನನು - ಯೋಬನು ದೇವರಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಸೈತಾನನು ಹೀಗೆ ಎಂದನು : “ಲಾಭವಿಲ್ಲದೆ ಯೋಬನು ನಿಮ್ಮಲ್ಲಿ ಭಯಭಕ್ತಿ ಇಟ್ಟಿದ್ದಾನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದಕ್ಕೆ ಸೈತಾನನು, “ಹೌದು! ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿರುವುದಕ್ಕೆ ಒಳ್ಳೆಯ ಕಾರಣವೊಂದಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಸೈತಾನನು ಉತ್ತರವಾಗಿ ಯೆಹೋವ ದೇವರಿಗೆ, “ಲಾಭವಿಲ್ಲದೆ ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:9
9 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಆಗ ಯೋಬನು ಆಕೆಗೆ - ಮೂರ್ಖಳು ಮಾತಾಡಿದಂತೆ ನೀನು ಮಾತಾಡುತ್ತೀ; ದೇವರ ಹಸ್ತದಿಂದ ನಾವು ಒಳ್ಳೇದನ್ನು ಹೊಂದುತ್ತೇವಷ್ಟೆ; ಕೆಟ್ಟದ್ದನ್ನು ಹೊಂದಬಾರದೋ ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತೊಂದೂ ಅವನ ತುಟಿಗಳಿಂದ ಹೊರಡಲಿಲ್ಲ.


ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು