Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:14 - ಕನ್ನಡ ಸತ್ಯವೇದವು J.V. (BSI)

14 ಅದೇನಂದರೆ - ನಾನು ತಪ್ಪುಮಾಡಿದರೆ ನೀನು ಗಮನಿಸುತ್ತೀ; ನನ್ನ ದೋಷವನ್ನು ಕ್ಷವಿುಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ತಪ್ಪುಮಾಡಿದರೆ ಅದನು ಕಂಡುಹಿಡಿದು ಆ ದೋಷಕ್ಕೆ ಕ್ಷಮೆ ನೀಡಕೂಡದೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:14
13 ತಿಳಿವುಗಳ ಹೋಲಿಕೆ  

ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು?


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳುಕೊಂಡಿದ್ದೀ;


ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ.


ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.


ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.


ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.


ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದೀ.


ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಲ್ಲ, ಪ್ರತ್ಯಕ್ಷದಲ್ಲೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು